Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:6 - ಕನ್ನಡ ಸತ್ಯವೇದವು C.L. Bible (BSI)

6 ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು; ಅವನ ಹೆಸರು ಯೋಹಾನನು. ಈ ಯೋಹಾನನು ಸಾಕ್ಷಿಗಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋಹಾನ ಎಂಬ ಒಬ್ಬ ಮನುಷ್ಯನನ್ನು ದೇವರು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾನ್ ಧಾಡುನ್ ದಿಲ್ಲೊ ಎಕ್ ಮಾನುಸ್ ಹೊತ್ತೊ, ತೆಚೆ ನಾಂವ್ ಜುವಾಂವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:6
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.


ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು.


ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I


‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು