Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:10 - ಕನ್ನಡ ಸತ್ಯವೇದವು C.L. Bible (BSI)

10 ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಚೊರ್ ಫಕತ್ ಚೊರುಕ್, ಜಿವಾನಿ ಮಾರುಕ್, ಅನಿ ಹಾಳ್ ಕರುಕ್ ಯೆತಾ, ಮಿಯಾ ತುಮ್ಕಾ ಜಿವ್ ಗಾವುಚೊ ಮನುನ್ ಯೆಲಾ, ಭರ್‍ಪುರ್ ಮಾಪಾನ್ ದಿವ್ಚೆ ಅನಿ ಜಿವ್ ದಿವ್ಚೆ ಮನುನ್ ಯೆಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:10
25 ತಿಳಿವುಗಳ ಹೋಲಿಕೆ  

ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಹೀಗೆ, ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೊಳ್ಳಬಾರದೇನು? “ಕದಿಯಬಾರದು” ಎಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತೀಯೇನು?


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು