Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:12 - ಕನ್ನಡ ಸತ್ಯವೇದವು C.L. Bible (BSI)

12 ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೂಲಿಯಾಳು ಕುರುಬನೂ ಕುರಿಗಳ ಒಡೆಯನೂ ಆಗಿರದೆ ತೋಳ ಬರುವದನ್ನು ಕಾಣುತ್ತಲೇ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ; ತೋಳವು ಅವುಗಳನ್ನು ಹಿಡುಕೊಂಡು ಹಿಂಡನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಜುರಿನ್ ಹೊತ್ತೊ ಮಾನುಸ್ ಕುರ್‍ಬುರ್ ನ್ಹಯ್, ಅನಿ ತಿ ಬಕ್ರಿ ತೆಚಿ ಸ್ವತಾಚಿ ನ್ಹಯ್. ತಸೆಮನುನ್ ಝುಲ್ ಕುತ್ರೆ ಯೆತಲೆ ಬಗಟಲ್ಲ್ಯಾ ತನ್ನಾ ತೊ ಪಳುನ್ ಜಾವ್ನ್ ಸೊಡ್ತಾ, ಅಶೆ ತೆ ಝುಲ್ ಕುತ್ರೆ ತ್ಯಾ ಬಕ್ರ್ಯಾತ್ನಿ ಗುಸುನ್ ಬಕ್ರ್ಯಾಕ್ನಿ ಮೊಡ್ತಾ, ಅನಿ ತಿ ಬಕ್ರಿ ಮಾಳ್ಬರ್ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:12
15 ತಿಳಿವುಗಳ ಹೋಲಿಕೆ  

ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಬಾಗಿಲ ಮೂಲಕ ಬರುವವನು ಕುರಿಗಾಹಿ.


ಅವನು ಕೇವಲ ಕೂಲಿಯಾಳು; ಕುರಿಗಳ‍ ಚಿಂತೆ ಅವನಿಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು