Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕೊನಾಕ್ಬಿ ಮಾಜೊ ಜಿವ್ ಕಾಡುನ್‍ ಘೆವ್ಕ್ ಹೊಯ್ನಾ, ಮಿಯಾ ಮಾಜ್ಯಾ ಸ್ವಂತ್ ಕುಶಿನ್ ತೊ ದಿತಾ. ಅನಿ ತೊ ಜಿವ್ ಪರ್ತುನ್ ಘೆತಲೊ ಹಕ್ಕ್ ಮಾಕಾ ಹಾಯ್, ಹೆ ಕರುಸಾಟ್ನಿ ಮನುನ್ ಮಾಜ್ಯಾ ಬಾಬಾನ್ ಮಾಕಾ ಹುಕುಮ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:18
23 ತಿಳಿವುಗಳ ಹೋಲಿಕೆ  

ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


“ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ.


ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು