Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:28 - ಕನ್ನಡ ಸತ್ಯವೇದವು C.L. Bible (BSI)

28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮಿಯಾ ತೆಂಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ, ತೆನಿ ಕನ್ನಾಬಿ ಮರಿನ್ಯಾತ್. ಕೊನಾಚ್ಯಾನ್ಬಿ ತೆಂಕಾ ಮಾಜೆಕ್ನಾ ಕಾಡುನ್ ಘೆವ್ಕ್ ಅನಿ ಮಾಜ್ಯಾಕ್ನಾ ಧುರ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:28
60 ತಿಳಿವುಗಳ ಹೋಲಿಕೆ  

ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


(’ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು).


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು.


ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು