Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:35 - ಕನ್ನಡ ಸತ್ಯವೇದವು C.L. Bible (BSI)

35 ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಸಗ್ಳೆ ಖರೆಚ್! ಮನುನ್ ಅಮ್ಕಾ ಗೊತ್ತ್ ಹಾಯ್, ದೆವ್ ಅಪ್ನಾಚಿ ಖಬರ್ ದಿವ್ನ್ ಧಾಡಲ್ಲ್ಯಾಕ್ನಿ ತುಮಿ ದೆವಾ ಸರ್ಕೆ ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:35
27 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.


“ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.


“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?


ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ?


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು