Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:36 - ಕನ್ನಡ ಸತ್ಯವೇದವು C.L. Bible (BSI)

36 ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆಚ್ ಮಾಜ್ಯಾ ಬಾಬಾನ್‍ಬಿ ಮಾಕಾ ಎಚುನ್ ಕಾಡುನ್ ಹ್ಯಾ ಜಗಾತ್ ಧಾಡುನ್ ದಿಲ್ಯಾನಾಯ್, ತಸೆ ಜಾಲ್ಯಾರ್ ಮಿಯಾ ದೆವಾಚೊ ಲೆಕ್ ಮಟಲ್ಲೆ ತುಮಿ ನಿಂದ್ಯಾ ಕರ್‍ಲ್ಯಾ ಸರ್ಕೆ ಕಶೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:36
39 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು