Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:6 - ಕನ್ನಡ ಸತ್ಯವೇದವು C.L. Bible (BSI)

6 ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಹೇಳಿದ ಈ ಸಾಮ್ಯದ ಅರ್ಥವನ್ನು ಜನರು ಗ್ರಹಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜೆಜುನ್ ಹಿ ಕಾನಿ ತೆಂಕಾ ಸಾಂಗಟ್ಲ್ಯಾನ್ ಹೊಯ್, ಖರೆ ತೆಂಕಾ ಕಾಯ್ಬಿ ಕಳುಕ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:6
20 ತಿಳಿವುಗಳ ಹೋಲಿಕೆ  

ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.


“ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಯೇಸು ಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ.


‘ನನ್ನನ್ನು ಅರಸುವಿರಿ, ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನಿರುವಲ್ಲಿಗೆ ನೀವು ಬರುವಂತಿಲ್ಲ’ ಎಂದು ಇವನು ಹೇಳುವುದರ ಅರ್ಥ ಏನಿರಬಹುದು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.


ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.


ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಅದಕ್ಕೆ ಶಿಷ್ಯರು, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.


“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು