Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಯೇಸು ಮತ್ತೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನೇ ಕುರಿಗಳಿಗೆ ಬಾಗಿಲಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಮನುನ್ ಜೆಜುನ್ ತೆಂಕಾ “ಅನಿ ಎಗ್ದಾ ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಬಕ್ರ್ಯಾನಿಕ್ಡೆ ಜಾತಲಿ ದಡ್ಪೊ ಮಿಯಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:7
12 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.


ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು