Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:15 - ಕನ್ನಡ ಸತ್ಯವೇದವು C.L. Bible (BSI)

15 ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತುಮ್ಕಾ ಲಾಗುನ್ ಮಿಯಾ ತ್ಯೆಚ್ಯಾ ವಾಂಗ್ಡಾ ನಸಲ್ಲ್ಯಾಸಾಟಿ ಮಾಕಾ ಖುಶಿ ಹೊತಾ, ಅಶೆಚ್ ತುಮಿ ವಿಶ್ವಾಸ್ ಕರ್‍ತ್ಯಾಶಿ. ಚಲಾ ಅಮಿ ಲಾಜರಾಕ್ಡೆ ಜಾಂವ್ವಾ” ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:15
16 ತಿಳಿವುಗಳ ಹೋಲಿಕೆ  

ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಯೇಸು ಸ್ವಾಮಿ, “ಈ ವಾಣಿಯಾದುದು ನಿಮಗಾಗಿ, ನನಗಾಗಿ ಅಲ್ಲ.


ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.


ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.


ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.


ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನೂ ಗದರಿಸದೆ ಬಿಡಲಿಲ್ಲ : II


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಆದುದರಿಂದ ಯೇಸು ಅವರಿಗೆ ಸ್ಪಷ್ಟವಾಗಿ, “ಲಾಸರನು ಸತ್ತುಹೋಗಿದ್ದಾನೆ;


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು