Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ದಿದಿಮೊಸ್ ಮನ್ತಲೊ ಥೊಮಸಾನ್ ಅಪ್ನಾಚ್ಯಾ ವಾಂಗುಡ್ಚ್ಯಾ ಶಿಸಾಕ್ನಿ, “ಅಮಿ ಸಗ್ಳಿ ಲೊಕಾಬಿ ಗುರುಜಿಚ್ಯಾ ವಾಂಗ್ಡಾ ಥೈ ಜಾಂವ್ವಾ, ಅಶೆಚ್ ಅಮಿಬಿ ತೆಚ್ಯಾ ವಾಂಗ್ಡಾ ಮರುಕ್ ಹೊತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:16
12 ತಿಳಿವುಗಳ ಹೋಲಿಕೆ  

ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.


ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು


ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು.


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.


ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ಅದಕ್ಕೆ ಪೇತ್ರನು, “ಗುರುದೇವಾ, ನಿಮ್ಮ ಸಂಗಡ ಸೆರೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಿದ್ದೇನೆ,” ಎಂದನು.


ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು