Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:19 - ಕನ್ನಡ ಸತ್ಯವೇದವು C.L. Bible (BSI)

19 ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಜುದೆಯಾತ್ಲಿ ಲೈ ಲೊಕಾ ಅಪ್ನಾಚ್ಯಾ ಭಾವಾಚ್ಯಾ ಮರ್‍ನಾಕ್ ಲಾಗುನ್ ದುಖಾತ್ ಹೊತ್ತ್ಯಾ ಮಾರ್ಥಾಕ್ ಅನಿ ಮರಿಕ್ ಭೆಟುಕ್ ಮನುನ್ ಯೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:19
28 ತಿಳಿವುಗಳ ಹೋಲಿಕೆ  

ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.


ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.


ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.


ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.


ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; "ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.


ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸವನ್ನು ಆಚರಿಸಿದರು.


ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (


ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.


ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು.


ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು.


ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು