Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:2 - ಕನ್ನಡ ಸತ್ಯವೇದವು C.L. Bible (BSI)

2 ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈ ಮರಿಯಳು ಯೇಸುಸ್ವಾವಿುಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೇಕೂದಲಿನಿಂದ ಒರಸಿದವಳು. ಈಕೆಯ ತಮ್ಮನಾದ ಲಾಜರನೇ ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುಚ್ಯಾ ಪಾಯಾ ವೈನಿ ಬರಿ ವಾಸ್ ಯೆತಲೆ ತೆಲ್ ಜೆಜುಚ್ಯಾ ಪಾಂಯಾಂಚ್ಯಾ ವರ್ತಿ ವೊತಲ್ಲಿ ಅನಿ ಅಪ್ನಾಚ್ಯಾ ಕೆಸಾನಿ ಪುಸಲ್ಲಿ ಮರಿ ಹಿ, ಶಿಕ್ ಅಸಲ್ಲೊ ಲಾಜರ್ ಹಿಚೊ ಭಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:2
11 ತಿಳಿವುಗಳ ಹೋಲಿಕೆ  

ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.


ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ.


ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.


‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.


ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು