Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:20 - ಕನ್ನಡ ಸತ್ಯವೇದವು C.L. Bible (BSI)

20 ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವದಕ್ಕೆ ಹೋದಳು; ಆದರೆ ಮರಿಯಳು ಮನೆಯಲ್ಲೇ ಕೂತುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಬರುತ್ತಿದ್ದಾನೆ ಎಂಬ ಸುದ್ದಿಯನ್ನು ಕೇಳಿ ಮಾರ್ಥಳು ಆತನನ್ನು ವಂದಿಸಲು ಹೊರಗೆ ಹೋದಳು. ಆದರೆ ಮರಿಯಳು ಮನೆಯಲ್ಲೇ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ಯೆವ್ಲಾ ಮನುನ್ ಖಬರ್ ಆಯ್ಕಲ್ಲ್ಯಾ ತನ್ನಾ ಮಾರ್ಥಾ ಜೆಜುಕ್ ಭೆಟುಕ್ ಮನುನ್ ಘರಾತ್ನಾ ಭಾಯ್ರ್ ಗೆಲಿ, ಖರೆ ಮರಿ ಭುತ್ತುರ್ ಘರಾತುಚ್ ರ್‍ಹಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:20
7 ತಿಳಿವುಗಳ ಹೋಲಿಕೆ  

ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿಯನು ಅವನನ್ನು ಎದುರುಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರಮಾಡಿದನು.


ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು.


“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.


“ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು