Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:33 - ಕನ್ನಡ ಸತ್ಯವೇದವು C.L. Bible (BSI)

33 ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಜೆಜುನ್ ಮರಿ ಅನಿ ತಿಚ್ಯಾ ವಾಂಗ್ಡಾ ಹೊತ್ತಿ ಲೊಕಾ ರಡ್ತಲೆ ಬಗಟ್ಲ್ಯಾನ್, ತೆಚ್ಯಾ ಮನಾಕ್ ಬೆಜಾರ್ ಹೊಲೊ ಅನಿ ತೊ ಕಳ್ವಳ್ಳೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:33
15 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.


ಯೇಸು ಅವರಿಗೆ, “ಆತನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು, “ಬಂದು ನೋಡಿ ಸ್ವಾಮೀ,” ಎಂದರು.


ಯೇಸು ಕಣ್ಣೀರಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು