Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:36 - ಕನ್ನಡ ಸತ್ಯವೇದವು C.L. Bible (BSI)

36 ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೂದ್ಯರು ನೋಡಿ - ಆಹಾ, ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದನು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜುದೆವ್ ಲೊಕಾನಿ ಸಾಂಗಟಲ್ಲ್ಯಾನಿ, “ಬಗಾ ತೆಕಾ ತೆಚೊ ಕವ್ಡೊ ಪ್ರೆಮ್ ಹೊತ್ತೊ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:36
10 ತಿಳಿವುಗಳ ಹೋಲಿಕೆ  

ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು