Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:39 - ಕನ್ನಡ ಸತ್ಯವೇದವು C.L. Bible (BSI)

39 ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಯೇಸು - ಆ ಕಲ್ಲನ್ನು ತೆಗೆದುಹಾಕಿರಿ ಅನ್ನಲು ತೀರಿಹೋದವನ ಅಕ್ಕನಾದ ಮಾರ್ಥಳು - ಸ್ವಾಮೀ, ಅವನು ಸತ್ತು ನಾಲ್ಕು ದಿವಸವಾಯಿತು; ಈಗ ನಾತ ಹುಟ್ಟಿದೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್, “ಹ್ಯೊ ಗುಂಡೊ ಕಡೆಕ್ ಕಾಡಾ!” ಮನುನ್ ಹುಕುಮ್ ದಿಲ್ಯಾನ್. ತನ್ನಾ ಮಾರ್ಥಾನ್ ತ್ಯಾ ಮರಲ್ಲ್ಯಾ ಮಾನ್ಸಾಚ್ಯಾ ಭೆನಿನ್, “ಧನಿಯಾ ತೆಕಾ ಸಮಾದಿತ್ ಥವ್ನ್ ಚಾರ್ ದಿಸಾ ಹೊಲಿ ತೆಕಾ ಬುರ್ಶಿ ವಾಸ್ ಪಡ್ಲಾ ಅಶಿಲ್!” ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:39
11 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು.


“ಸಮಾಧಿಯ ದ್ವಾರಕ್ಕೆ ಮುಚ್ಚಿರುವ ಕಲ್ಲನ್ನು ನಮಗೆ ಉರುಳಿಸಿಕೊಡುವವರು ಯಾರು?” ಎಂದು ಅವರು ತಮ್ಮತಮ್ಮಲ್ಲಿ ಮಾತನಾಡಿಕೊಳ್ಳುತ್ತಿದ್ದರು. ಏಕೆಂದರೆ, ಆ ಕಲ್ಲು ಬಹಳ ದೊಡ್ಡದಾಗಿತ್ತು.


ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು