ಯೋಹಾನ 11:4 - ಕನ್ನಡ ಸತ್ಯವೇದವು C.L. Bible (BSI)4 ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಹಿ ಬಾತ್ಮಿ ಆಯ್ಕಲ್ಲ್ಯಾ ತನ್ನಾ ಜೆಜುನ್ “ಹ್ಯಾ ಪಿಡೆಚೊ ಪರಿನಾಮ್ ಲಾಜರಾಚ್ಯಾ ಮರ್‍ನಾಚ್ಯಾ ವೈನಾ ಸರಿನಾ, ಹೆ ದೆವಾಕ್ ಮಹಿಮಾ ಹಾನುಸಾಟ್ನಿ ಮನುನ್ ಹೊಲಾ, ಅನಿ ಹಿಚ್ಯಾ ವೈನಾ ಮಾನ್ಸಾಚೊ ಲೆಕ್ ಮಹಿಮಾ ಜೊಡುನ್ ಘೆತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |