Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:42 - ಕನ್ನಡ ಸತ್ಯವೇದವು C.L. Bible (BSI)

42 ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನೀನು ಯಾವಾಗಲೂ ನನ್ನ ಪ್ರಾರ್ಥನೆಯನ್ನು ಕೇಳುವವನಾಗಿದ್ದೀ ಎಂದು ನನಗೆ ಗೊತ್ತೇ ಇದೆ; ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿ ಎಂದು ಸುತ್ತಲು ನಿಂತಿರುವ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದೆನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತಿಯಾ ಕನ್ನಾಬಿ ಮಾಜೆ ಆಯಿಕ್ತೆ ಮನುನ್ ಮಾಕಾ ಗೊತ್ತ್ ಹಾಯ್, ಖರೆ ಹ್ಯಾ ಹಿತ್ತೆ ಹೊತ್ತ್ಯಾ ಲೊಕಾಂಚ್ಯಾಸಾಟಿ ಅಶೆಚ್ ಮನುಲಾ, ಅಶೆಚ್ ತೆನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್‍ ವಿಶ್ವಾಸ್ ಕರುಂದಿತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:42
27 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು.


ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ನಾನು ತೀರ್ಪುಕೊಟ್ಟರೂ ಅದು ಯಥಾರ್ಥವಾದುದು. ಕಾರಣ, ತೀರ್ಪುಕೊಡುವವನು ನಾನೊಬ್ಬನೇ ಅಲ್ಲ; ನನ್ನನ್ನು ಕಳುಹಿಸಿದ ಪಿತ ಸಹ ನನ್ನೊಡನೆ ಇದ್ದಾರೆ.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು