Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:44 - ಕನ್ನಡ ಸತ್ಯವೇದವು C.L. Bible (BSI)

44 ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಮರಲ್ಲೊ ಮಾನುಸ್ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಾಕ್ನಿ ಅನಿ ಪಾಂಯಾಕ್ನಿ ಫಾಳಿಯಾ ಲಪಟಲ್ಲ್ಯಾ ಹೊತ್ತ್ಯಾ ಅನಿ ತ್ಯೆಚ್ಯಾ ತೊಂಡಾರ್ ಬಿ ಎಕ್ ಕಪ್ಡೊ ಲಪ್ಟಲ್ಲೊ ಹೊತ್ತೊ. ತನ್ನಾ ಜೆಜುನ್ ತೆಂಕಾ, “ತೆಕಾ ಲಪ್ಟಲ್ಲೊ ಕಪ್ಡೊ ಸೊಡ್ವಾ ಅನಿ ತೊ ಜಾಂವ್ದಿತ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:44
20 ತಿಳಿವುಗಳ ಹೋಲಿಕೆ  

ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಇವರು ಯೇಸುವಿನ ಪಾರ್ಥಿವ ಶರೀರವನ್ನು ತೆಗೆದು, ಯೆಹೂದ್ಯರ ಶವಸಂಸ್ಕಾರದ ಪದ್ಧತಿಯಂತೆ ಸುಗಂಧ ದ್ರವ್ಯಗಳನ್ನು ಹಾಕಿ ನಾರುಮಡಿಯಲ್ಲಿ ಸುತ್ತಿದರು.


ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ.


ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.


“ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು