Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:52 - ಕನ್ನಡ ಸತ್ಯವೇದವು C.L. Bible (BSI)

52 ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಅನಿ ಖಾಲಿ ತೆಂಕಾ ಎವ್ಡೆಚ್ ನ್ಹಯ್, ಮಾಳ್ಬರ್ ಹೊವ್ನಗೆಲ್ಲ್ಯಾ ದೆವಾಚ್ಯಾ ಲೊಕಾಕ್ನಿ ಗೊಳಾ ಕರುನ್ ಎಕ್ ಕರುಕಸಾಟ್ನಿ ತೊ ಮರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:52
40 ತಿಳಿವುಗಳ ಹೋಲಿಕೆ  

ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;


ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು