Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:53 - ಕನ್ನಡ ಸತ್ಯವೇದವು C.L. Bible (BSI)

53 ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಆ ದಿನದಿಂದ ಆತನನ್ನು ಕೊಲ್ಲುವದಕ್ಕೆ ಆಲೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತ್ಯಾ ದಿಸಾತ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಜೆಜುಕ್ ಜಿವಾನಿ ಮಾರ್‍ತಲೆ ಮನುನ್ ಯೆವ್ಜನ್ ಘಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:53
22 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು.


ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.


ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಯೆರೆಮೀಯನು ಚಿದ್ಕೀಯನಿಗೆ, “ನಾನು ತಮಗೆ ಇದ್ದದ್ದನ್ನು ಇದ್ದಹಾಗೆ ಹೇಳಿದರೆ ತಾವು ನನ್ನನ್ನು ಕೊಂದುಹಾಕುವುದು ನಿಶ್ಚಯವಲ್ಲವೆ? ನಾನು ತಮಗೆ ಬುದ್ಧಿವಾದ ಹೇಳಿದರೆ ತಾವು ಕೇಳುವುದಿಲ್ಲ,” ಎಂದು ಉತ್ತರಕೊಟ್ಟನು.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಪ್ರಭುವಿನ ಸಿರಿನಾಮವು ಪೂಜ್ಯ I ಇಂದಿಗೂ ಎಂದೆಂದಿಗೂ ಪೂಜ್ಯ II


ನನಗೆದುರಾಗಿ ಶತ್ರುಗಳಾಲೋಚಿಸುತಿಹರಯ್ಯಾ I ನನ್ನ ಕೊಲೆಗಾಗಿ ಒಂದುಗೂಡಿ ಹೊಂಚಿಸುತಿಹರಯ್ಯಾ II


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಕಡೆಗೆ ನಾನು ಅವರನ್ನು, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಮತ್ತೆ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು,” ಎಂದು ಗದರಿಸಿದೆ.


ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.


ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು