Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:8 - ಕನ್ನಡ ಸತ್ಯವೇದವು C.L. Bible (BSI)

8 ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಶಿಸಾನಿ, “ಗುರುಜಿ, ಅತ್ತಾ ಎಕ್ ಉಲ್ಲ್ಯಾ ಎಳಾಚ್ಯಾ ಫಾಟಿ ಥೈ ತುಕಾ ಲೊಕಾ ಗುಂಡ್ಯಾನಿ ಮಾರುಕ್ ಮನುನ್ ಉಟಲ್ಲಿ, ಅನಿ ತಿಯಾ ಥೈಚ್ ಜಾವ್ಕ್ ಬಗುಲೆ ಕಾಯ್?” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:8
11 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.


ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.


ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು