Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:15 - ಕನ್ನಡ ಸತ್ಯವೇದವು C.L. Bible (BSI)

15 ಇದನ್ನು ಕುರಿತೇ, ‘ಸಿಯೋನ್ ನಗರಿಯೇ, ಅಂಜಬೇಡ. ಇಗೋ ನೋಡು; ಹೇಸರಗತ್ತೆಯನ್ನೇರಿ ಬರುತ್ತಿರುವನು ನಿನ್ನ ಅರಸನು’ ಎಂದಿದೆ ಪವಿತ್ರಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಚೀಯೋನ್ ನಗರಿಯೇ, ಹೆದರಬೇಡ; ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ ಎಂಬ ಶಾಸ್ತ್ರದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಸಿಯೋನ್ ನಗರವೇ, ಭಯಪಡಬೇಡ! ನೋಡು! ನಿನ್ನ ರಾಜನು ಬರುತ್ತಿದ್ದಾನೆ. ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಭಿಂವ್ನಕಾಶಿ! ಸಿಯೊನಾಚ್ಯಾ ಶಾರಾಚ್ಯಾ ಲೊಕಾನು ಅಬಕ್ ಹಿತ್ತೆ ತುಜೊ ರಾಜಾ ಎಕ್ ಗಾಡ್ವಾ ವರ್ತಿ ಬಸುನ್ ಯೆತಾ. ಮನುನ್ ಸಾಂಗಲ್ಲ್ಯಾ ಸರ್ಕೆ ಜೆಜು ಗಾಡ್ವಾ ವರ್ತಿ ಬಸುನ್ ಯೆವ್ಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:15
17 ತಿಳಿವುಗಳ ಹೋಲಿಕೆ  

ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.


ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ.


“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.


ಸ್ವಲ್ಪಕಾಲವಾದನಂತರ ಅಬ್ಷಾಲೋಮನು ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಮಂದಿ ಆಳುಗಳನ್ನು ನೇಮಿಸಿದನು. ಅದಕ್ಕಾಗಿ ಒಂದು ರಥವನ್ನೂ ಕುದುರೆಗಳನ್ನೂ ಪಡೆದುಕೊಂಡನು.


ಯೇಸು ದಾರಿಯಲ್ಲಿದ್ದ ಪ್ರಾಯದ ಹೇಸರಗತ್ತೆಯೊಂದನ್ನು ಹತ್ತಿಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು