Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:17 - ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಬದುಕಿಸಿದ ವೇಳೆಯಲ್ಲಿ ಆತನ ಸಂಗಡ ಇದ್ದ ಜನರು ಅದನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆಜು ಲಾಜರಾಕ್ ಸಮಾದಿತ್ನಾ ಭಾಯ್ರ್ ಯೆ ಮನುನ್ ಬಲ್ವುನ್ ಝಿತ್ತೊ ಕರುನ್ ಉಟ್ವುತಾನಾ ಥೈ ಹೊತ್ತ್ಯಾ ಲೊಕಾನಿ ಥೈ ಕಾಯ್ ಕಾಯ್ ಹೊಲೆ ಮನ್ತಲೆ ಸಗ್ಳೆ ಸಾಂಗಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:17
17 ತಿಳಿವುಗಳ ಹೋಲಿಕೆ  

ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.


ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ಯೇಸು ಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.


ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.


ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದುಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು