Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:18 - ಕನ್ನಡ ಸತ್ಯವೇದವು C.L. Bible (BSI)

18 ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಎದುರುಗೊಳ್ಳುವದಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಮಾಡಿದ ಈ ಅದ್ಭುತಕಾರ್ಯವನ್ನು ಕೇಳಿ, ಅನೇಕ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಅಜಾಪ್ ಕರಲ್ಲೆ ಲೈ ಲೊಕಾಂಚ್ಯಾ ತಾಂಡ್ಯಾನ್ ಆಯ್ಕಲ್ಲ್ಯಾನ್ ತೆಚೆಸಾಟ್ನಿ ತೆನಿ ತೆಕಾ ಬಗುಕ್ ಗೆಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:18
6 ತಿಳಿವುಗಳ ಹೋಲಿಕೆ  

ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ಮಾರನೆಯ ದಿನ ಯೇಸು ಸ್ವಾಮಿ ಜೆರುಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಹರಡಿತು.ಹಬ್ಬಕ್ಕೆ ಬಂದು ನೆರೆದಿದ್ದ ಜನಸಮೂಹಕ್ಕೆ ಈ ಸುದ್ದಿ ಮುಟ್ಟಿತು.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು