Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:19 - ಕನ್ನಡ ಸತ್ಯವೇದವು C.L. Bible (BSI)

19 ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಫಾರಿಜೆವಾನಿ ಎಕಾಮೆಕಾಕ್ನಿ, “ಬಗಾ ಅಮ್ಚೆನಿ ಕಾಯ್ ಬಿ ಕರುಕ್ ಹೊಯ್ನಾ ಹೊಲಾ! ಸಗ್ಳೊ ಜಗುಚ್ ತ್ಯೆಚ್ಯಾ ಫಾಟ್ನಾ ಜಾವ್ಲಾಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:19
14 ತಿಳಿವುಗಳ ಹೋಲಿಕೆ  

ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.


ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ಆರಾಧನೆಗೆಂದು ಹಬ್ಬಕ್ಕೆ ಬಂದಿದ್ದವರಲ್ಲಿ ಕೆಲವರು ಗ್ರೀಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು