Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:26 - ಕನ್ನಡ ಸತ್ಯವೇದವು C.L. Bible (BSI)

26 ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆ ಕೊನಾಕ್ ಮಾಜಿ ಸೆವಾ ಕರುಕ್ ಪಾಜೆ ತೊ ಮಾಜ್ಯಾ ಫಾಟ್ನಾ ಯೆಂವ್ದಿತ್, ಅಶೆಚ್ ಮಿಯಾ ಖೈ ರ್‍ಹಾತಾ ಥೈ ಮಾಜೊ ಸೆವಕ್ ಬಿ ರ್‍ಹಾತಾ. ಅನಿ ಮಾಜೊ ಬಾಬಾ ಮಾಜಿ ಸೆವಾ ಕರ್‍ತಲ್ಯಾಕ್ ಮಾಜೊ ಬಾಬಾ ಭೊಮಾನ್ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:26
34 ತಿಳಿವುಗಳ ಹೋಲಿಕೆ  

ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.


ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;


ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.


ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು