Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:28 - ಕನ್ನಡ ಸತ್ಯವೇದವು C.L. Bible (BSI)

28 ‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಬಾಬಾ, ತುಜೆ ನಾವ್ ಮಹಿಮೆವಂತ್ ಹೊಯ್ ಸಾರ್ಕೆ ಕರ್! ತನ್ನಾ ಸರ್ಗಾವೈನಾ ಮಿಯಾ ತೆ ಮಹಿಮೆವಂತ್ ಕರ್‍ಲಾ ಅನಿ ಅನಿ ಎಗ್ದಾ ತೆ ಮಹಿಮೆವಂತ್ ಕರ್‍ತಾ” ಮನುನ್ ಧನ್ ಆಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:28
22 ತಿಳಿವುಗಳ ಹೋಲಿಕೆ  

ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.


ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.


ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.


ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು