Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:29 - ಕನ್ನಡ ಸತ್ಯವೇದವು C.L. Bible (BSI)

29 ಅಲ್ಲಿ ನಿಂತುಕೊಂಡಿದ್ದ ಜನರು ಆ ವಾಣಿಯನ್ನು ಕೇಳಿ, “ಇದೇನು ಗುಡುಗಿನ ಸದ್ದು?” ಎಂದರು. ಕೆಲವರು, “ದೇವದೂತನೊಬ್ಬ ಆತನೊಡನೆ ಮಾತನಾಡಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ - ಗುಡುಗಿತು ಅಂದರು. ಇನ್ನು ಕೆಲವರು - ದೇವದೂತನು ಈತನ ಸಂಗಡ ಮಾತಾಡಿದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಥೈ ಇಬೆ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾನ್ ತೊ ಧನ್ ಆಯಿಕ್ಲ್ಯಾನ್ ಅನಿ ಉಲ್ಲ್ಯಾ ಲೊಕಾನಿ ಗುಡ್ಗುಡೊ ತೊ ಮಟ್ಲ್ಯಾನಿ ಅನಿ ಹುರಲ್ಲ್ಯಾನಿ, “ತ್ಯೆಚ್ಯಾ ವಾಂಗ್ಡಾ ಎಕ್ ದೆವಾಚ್ಯಾದುತಾನ್‍ ಬೊಲ್ಲ್ಯಾನ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:29
12 ತಿಳಿವುಗಳ ಹೋಲಿಕೆ  

ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು