ಯೋಹಾನ 12:34 - ಕನ್ನಡ ಸತ್ಯವೇದವು C.L. Bible (BSI)34 ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ಅಮ್ಚೊ ಖಾಯ್ದೊ ಮೆಸ್ಸಿಯಾಕ್ ಕನ್ನಾಚ್ ಮರಾನ್ ನಾ ಮನ್ತಾ, ತಸೆಜಾಲ್ಯಾರ್ ಮಾನ್ಸಾಚ್ಯಾ ಲೆಕಾಕ್ ವೈರ್ ಉಕ್ಲುನ್ ಹೊತಾ ಮನುನ್ ತಿಯಾ ಕಶೆ ಮನ್ತೆಯ್? ಮಾನ್ಸಾಚೊ ಲೆಕ್ ಮಟ್ಲ್ಯಾರ್ ತೊ ಕೊನ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |