Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:36 - ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ; ನಂಬಿದರೆ ನೀವು ಬೆಳಕಿನವರಾಗುವಿರಿ ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಕವ್ಡ್ಯಾ ಪತರ್ ಉಜ್ವೊಡ್ ತುಮ್ಚೆ ವಾಂಗ್ಡಾ ರ್‍ಹಾತಾನಾಚ್ ತುಮಿ ತ್ಯೆಚೆವರ್ತಿ ವಿಶ್ವಾಸ್ ಕರಾ, ಅಶೆಚ್ ತುಮಿ ಉಜ್ವೊಡಾಚಿ ಲೊಕಾ ಹೊವ್ನ್ ರ್‍ಹಾತ್ಯಾಶಿ” ಮನುನ್ ಜಬಾಬ್ ದಿಲ್ಯಾನ್. ಎವ್ಡೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜು ತೆಂಚೆತ್ನಾ ಭಾಯ್ರ್ ಪಡುನ್ ಗೆಲೊ, ಅನಿ ತೆಂಕಾ ದಿಸುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:36
17 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.


ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.


ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.


“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು