ಯೋಹಾನ 12:47 - ಕನ್ನಡ ಸತ್ಯವೇದವು C.L. Bible (BSI)47 ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಯಾವನಾದರೂ ನನ್ನ ಮಾತುಗಳನ್ನು ಕೇಳಿದರೂ ಕೈಕೊಂಡು ನಡೆಯದೆ ಹೋದರೆ ನಾನೇ ಅವನಿಗೆ ತೀರ್ಪುಮಾಡುವದಿಲ್ಲ; ಲೋಕಕ್ಕೆ ತೀರ್ಪುಮಾಡುವದಕ್ಕಾಗಿ ನಾನು ಬಂದಿಲ್ಲ; ಲೋಕವನ್ನು ರಕ್ಷಿಸುವದಕ್ಕಾಗಿ ಬಂದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 “ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಕೊನ್ ಮಾಜಿ ಗೊಸ್ಟಿಯಾ ಆಯ್ಕುನ್ ತಿ ಪಾಳಿನಾ, ಮಿಯಾ ತೆಚಿ ನಿತ್ ಕರಿನಾ. ಕಶ್ಯಾಕ್ ಮಟ್ಲ್ಯಾರ್ ಜಗಾಚಿ ನಿತ್ ಕರುಕ್ ಮನುನ್ ಮಿಯಾ ಯೆವ್ಕ್ ನಾ, ಜಗಾಕ್ ಹುರ್‍ವುನ್ ಘೆವ್ಕ್ ಮನುನ್ ಯೆಲಾ. ಅಧ್ಯಾಯವನ್ನು ನೋಡಿ |