Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:5 - ಕನ್ನಡ ಸತ್ಯವೇದವು C.L. Bible (BSI)

5 “ಈ ಸುಗಂಧ ತೈಲವನ್ನು ಮುನ್ನೂರು ದೆನಾರಿ ನಾಣ್ಯಗಳಿಗೆ ಮಾರಿ, ಬಂದ ಹಣವನ್ನು ಬಡಬಗ್ಗರಿಗೆ ಕೊಡಬಹುದಿತ್ತಲ್ಲಾ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೆ ಈ ತೈಲವನ್ನು ಮುನ್ನೂರು ಹಣಕ್ಕೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಹೆ ಎವ್ಡೆ ಬರೆ ವಾಸೆಚೆ ತೆಲ್ ತಿನ್ಶೆ ಚಾಂದಿಚ್ಯಾ ಪೈಸ್ಯಾಕ್ನಿ ಇಕುನ್, ಯೆಲ್ಲೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ನಶಿ ಹೊತ್ತೆ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:5
16 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.


“ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?


ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ.


ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.


“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.


ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು,


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.


ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು