Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:50 - ಕನ್ನಡ ಸತ್ಯವೇದವು C.L. Bible (BSI)

50 ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಅನಿ ತೆನಿ ದಿಲ್ಲಿ ಹುಕುಮ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ ಮನುನ್ ಮಾಕಾ ಗೊತ್ತ್ ಹಾಯ್, ತಸೆಮನುನ್ ಮಿಯಾ ಮಾಜ್ಯಾ ಬಾಬಾನ್ ಸಾಂಗ್ ಮನುನ್ ಸಾಂಗಲ್ಲೆಚ್ ಸಾಂಗ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:50
12 ತಿಳಿವುಗಳ ಹೋಲಿಕೆ  

ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು