Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:11 - ಕನ್ನಡ ಸತ್ಯವೇದವು C.L. Bible (BSI)

11 ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ‘ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ತನ್ನನ್ನು ಹಿಡುಕೊಡುವವನು ಇಂಥವನೇ ಎಂದು ತಿಳಿದಿದ್ದದರಿಂದ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಪ್ನಾಕ್ ಧರುನ್ ದಿತಲೊ ಕೊನ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆಮನುನ್ ತೆನಿ, “ತುಮ್ಚ್ಯಾತ್ಲೊ ಎಕ್ಲೊ ಸೊಡುನ್ ತುಮಿ ಸಗ್ಳೆ ಜಾನಾ ಪವಿತ್ರ್ ನಾಶಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:11
9 ತಿಳಿವುಗಳ ಹೋಲಿಕೆ  

ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.


ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು