Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:13 - ಕನ್ನಡ ಸತ್ಯವೇದವು C.L. Bible (BSI)

13 ‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ನನ್ನನ್ನು ಗುರುವೆಂದೂ ಕರ್ತನೆಂದೂ ಕರೆಯುತ್ತೀರಿ; ನೀವು ಕರೆಯುವದು ಸರಿ; ನಾನು ಅಂಥವನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮಿ ಮಾಕಾ ಗುರುಜಿ ಅನಿ ಧನಿ ಮನುನ್ ಬಲ್ವುತ್ಯಾಶಿ. ಅನಿ ತುಮಿ ಬಲ್ವುತಲೆ ಸಮಾ ಹಾಯ್, ಮಿಯಾಚ್ ಹೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:13
18 ತಿಳಿವುಗಳ ಹೋಲಿಕೆ  

“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?


‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.


ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.


ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)


ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು