Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:18 - ಕನ್ನಡ ಸತ್ಯವೇದವು C.L. Bible (BSI)

18 “ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾಚ್ ವಿಶಯಾತ್ ಬೊಲಿನಾ ಹೊಲಾ, ಮಿಯಾ ಎಚುನ್ ಕಾಡಲ್ಲ್ಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್, ಖರೆ ಪವಿತ್ರ್ ಪುಸ್ತಕಾತ್ ಮಾಜ್ಯಾ ವಾಂಗ್ಡಾ ಎಕುಚ್ ಭಾನ್ಯಾತ್ ಜೆವಲ್ಲೊ ಮಾಜೆ ವರ್ತಿ ಪರತ್ತಾ ” ಮನುನ್ ಲಿವಲ್ಲೆ ಖರೆ ಹೊವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:18
27 ತಿಳಿವುಗಳ ಹೋಲಿಕೆ  

ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಅದಕ್ಕೆ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ರೊಟ್ಟಿಯನ್ನು ಅದ್ದುತ್ತಿರುವ ಇದೇ ಹನ್ನೆರಡುಮಂದಿಯಲ್ಲಿ ಒಬ್ಬನು ಅವನು.


ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.


ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಡನೆ ಅಲ್ಲಿಗೆ ಬಂದರು.


ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.


“ಆದರೆ ಇಗೋ, ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.


ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.


ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.


ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.


‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.


“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು