Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:24 - ಕನ್ನಡ ಸತ್ಯವೇದವು C.L. Bible (BSI)

24 ಸಿಮೋನಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವನಿಗೆ ಸೀಮೋನ ಪೇತ್ರನು ಸನ್ನೆಮಾಡಿ - ಯಾರನ್ನು ಕುರಿತು ಮಾತಾಡಿದನು, ತಿಳಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಸಿಮಾವ್ ಪೆದ್ರುನ್ ತ್ಯಾ ಶಿಸಾಕ್, “ತೊ ಕೊನಾಚ್ಯಾ ವಿಶಯಾತ್ ಬೊಲುಲಾ ಮನುನ್ ಇಚಾರ್” ಮನುನ್ ಸೊನ್ನಿ ಕರುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:24
7 ತಿಳಿವುಗಳ ಹೋಲಿಕೆ  

ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.


ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.


ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,


ಆಗ ಆ ಶಿಷ್ಯನು, ಯೇಸುವಿನ ಮಗ್ಗುಲಿಗೆ ಸರಿದು, “ಅಂಥವನು ಯಾರು ಪ್ರಭೂ?’ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು