ಯೋಹಾನ 13:29 - ಕನ್ನಡ ಸತ್ಯವೇದವು C.L. Bible (BSI)29 ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರಲ್ಲಿ ಕೆಲವರು - ಯೂದನ ವಶದಲ್ಲಿ ಹಣದ ಚೀಲವಿದ್ದದರಿಂದ ಹಬ್ಬಕ್ಕಾಗಿ ನಮಗೆ ಬೇಕಾದದ್ದನ್ನು ಕೊಂಡುಕೋ ಎಂಬದಾಗಿಯೋ ಬಡವರಿಗೆ ಏನಾದರೂ ಕೊಡು ಎಂಬದಾಗಿಯೋ ಯೇಸು ಅವನಿಗೆ ಹೇಳುತ್ತಾನೆ ಎಂದು ನೆನಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆಂಚೆಕ್ಡೆ ಹೊತ್ತ್ಯಾ ಪೈಶಾಂಚಿ ಜವಾಬ್ದಾರಿ ಜುದಾಸ್ ಬಗುನ್ ಘೆಯ್, ತಸೆಮನುನ್ ಉಲ್ಲ್ಯಾ ಶಿಸಾನಿ ಸನಾಕ್ ಪಾಜೆ ಹೊಲ್ಲೆ ಸಗ್ಳೆ ಹಾನ್, ನಾಹೊಲ್ಯಾರ್ ಕಾಯ್ಬಿ ಇಕಾತ್ ಹಾನುನ್ ಗರಿಬಾಕ್ನಿ ದಿವ್ಕ್ ಮನುನ್ ಜೆಜು ಜುದಾಸಾಕ್ ಸಾಂಗುಕ್ ಲಾಗ್ಲಾ ಮನುನ್ ಚಿಂತ್ಲ್ಯಾನಿ. ಅಧ್ಯಾಯವನ್ನು ನೋಡಿ |