Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:33 - ಕನ್ನಡ ಸತ್ಯವೇದವು C.L. Bible (BSI)

33 ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಪ್ರಿಯ ಮಕ್ಕಳೇ, ಇನ್ನು ಸ್ವಲ್ಪಕಾಲವೇ ನಿಮ್ಮ ಸಂಗಡ ಇರುತ್ತೇನೆ. ನನ್ನನ್ನು ಹುಡುಕುವಿರಿ, ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆ ಈಗ ನಿಮಗೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಮಾಜ್ಯಾ ಪೊರಾನೊ, ಮಿಯಾ ಅನಿ ಲೈ ಎಳ್ ತುಮ್ಚ್ಯಾ ವಾಂಗ್ಡಾ ರ್‍ಹಾಯ್ನಾ ತುಮಿ ಮಾಜಿ ವಾಟ್ ಬಗುನ್ಗೆತ್ ರ್‍ಹಾತ್ಯಾಶಿ, ಖರೆ ಅತ್ತಾ ಮಿಯಾ ತುಮ್ಕಾ ಜುದೆವಾಚ್ಯಾ ಫುಡಾರ್‍ಯಾಕ್ನಿ ಸಾಂಗಲ್ಲೆಚ್ ಸಾಂಗ್ತಾ ಮಿಯಾ ಜಾವ್ಕ್ ಲಾಗ್ಲಾ ಥೈ ತುಮ್ಚ್ಯಾನ್ ಜಾವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:33
13 ತಿಳಿವುಗಳ ಹೋಲಿಕೆ  

ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


‘ನನ್ನನ್ನು ಅರಸುವಿರಿ, ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನಿರುವಲ್ಲಿಗೆ ನೀವು ಬರುವಂತಿಲ್ಲ’ ಎಂದು ಇವನು ಹೇಳುವುದರ ಅರ್ಥ ಏನಿರಬಹುದು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು


ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು