Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:34 - ಕನ್ನಡ ಸತ್ಯವೇದವು C.L. Bible (BSI)

34 ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ; ಏನಂದರೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು; ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅನಿ ಅತ್ತಾ ಮಿಯಾ ತುಮ್ಕಾ ಎಕ್ ನ್ಹವೊ ಖಾಯ್ದೊ ದಿತಾ, ಮಿಯಾ ಕಸೊ ತುಮ್ಚೊ ಪ್ರೆಮ್ ಕರ್‍ಲೊ. ತಸೆ ತುಮಿ ಎಕಾಮೆಕಾಚೊ ಪ್ರೆಮ್ ಕರಾ, ತುಮಿ ಎಕಾಮೆಕಾಚೊ ಪ್ರೆಮ್ ಕರುಕುಚ್ ಪಾಜೆ ಮನುನುಚ್ ಮಿಯಾ ತಸೆ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:34
38 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.


ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು