Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಪೇತ್ರನು, “ಹಾಗಾದರೆ ಪ್ರಭೂ, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನೂ ತಲೆಯನ್ನೂ ತೊಳೆಯಿರಿ, ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೀಮೋನ ಪೇತ್ರನು - ಸ್ವಾಮೀ, ನನ್ನ ಕಾಲುಗಳನ್ನು ಮಾತ್ರವಲ್ಲದೆ ಕೈಗಳನ್ನೂ ತಲೆಯನ್ನೂ ಸಹ ತೊಳೆಯಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನನ್ನ ಪಾದಗಳನ್ನು ಮಾತ್ರವಲ್ಲದೆ, ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಸಿಮಾವ್ ಪೆದ್ರುನ್ “ತಸೆ ಹೊಲ್ಯಾರ್ ಧನಿಯಾ ಮಾಜೆ ಪಾಯ್ ಎವ್ಡೆಚ್ ನ್ಹಯ್! ಮಾಜಿ ಹಾತಾ ಅನಿ ಟಕ್ಲೆಬಿ ಧುವ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:9
9 ತಿಳಿವುಗಳ ಹೋಲಿಕೆ  

ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು