Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ತೆಂಕಾ, “ತುಮಿ ಭಿಂವ್ನಕಾಶಿ ಅನಿ ಬೆಜಾರ್ ಹೊವ್‍ನಕಾಶಿ ದೆವಾಚ್ಯಾ ವರ್ತಿ ವಿಶ್ವಾಸ್ ಕರಾ ಅನಿ ಮಾಜೆ ವರ್‍ತಿಬಿ ವಿಶ್ವಾಸ್ ಕರಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:1
37 ತಿಳಿವುಗಳ ಹೋಲಿಕೆ  

ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.


ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II


ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು