Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:13 - ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಮಿಯಾ ತುಮಿ ಮಾಜ್ಯಾ ನಾವಾನ್ ಕಾಯ್ ಮಾಗ್ತ್ಯಾಶಿ ತೆ ಸಗ್ಳೆ ಕರ್‍ತಾ. ಅಶೆ ಲೆಕ್ ಬಾಬಾಚಿ ಮಹಿಮಾ ವೈನಾ ದಾಕ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:13
36 ತಿಳಿವುಗಳ ಹೋಲಿಕೆ  

“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.


ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.


ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.


ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.


ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು