Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:15 - ಕನ್ನಡ ಸತ್ಯವೇದವು C.L. Bible (BSI)

15 ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಮಾಜೊ ಪ್ರೆಮ್ ಕರ್‍ತ್ಯಾಶಿ ಹೊಲ್ಯಾರ್, ತರ್ ಮಿಯಾ ದಿಲ್ಲೆ ಖಾಯ್ದೆ ತುಮಿ ಪಾಳ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:15
20 ತಿಳಿವುಗಳ ಹೋಲಿಕೆ  

ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು