ಯೋಹಾನ 14:19 - ಕನ್ನಡ ಸತ್ಯವೇದವು C.L. Bible (BSI)19 ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅನಿ ಎಕ್ ಉಲ್ಲ್ಯಾಶ್ಯಾ ಎಳಾನ್ ಹ್ಯೊ ಜಗ್ ಮಾಕಾ ಬಗಿನಾ. ಖರೆ ತುಮಿ ಮಾಕಾ ಬಗ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ಮಿಯಾ ಝಿತ್ತೊ ರ್‍ಹಾತಾ ಅನಿ ತುಮಿಬಿ ಝಿತ್ತೆ ರ್‍ಹಾತ್ಯಾಶಿ. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.