Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ತಂದೆಯ ಮನೆಯಲ್ಲಿ ಬಹಳ ಬಿಡಾರಗಳು ಅವೆ; ಇಲ್ಲದಿದ್ದರೆ ನಿಮಗೆ ಹೇಳುತ್ತಿದ್ದೆನು; ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ಮಾಜ್ಯಾ ಬಾಬಾಚ್ಯಾ ಘರಾತ್ ಲೈ ಖೊಲಿಯಾ ಹಾತ್, ಅನಿ ಮಿಯಾ ತುಮ್ಚ್ಯಾಸಾಟ್ನಿ ಜಾಗೊ ತಯಾರ್ ಕರುಕ್ ಮನುನ್ ಜಾವ್ಕ್ ಲಾಗ್ಲಾ, ನಾಹೊಲ್ಯಾರ್ ಹೆ ಸಗ್ಳೆ ಮಿಯಾ ಸಾಂಗಿನಸಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:2
25 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು


ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.


ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.


ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು