Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾಜ್ಯಾ ನಾವಾನ್ ಬಾಬಾನ್ ಧಾಡುನ್ ದಿಲ್ಲೊ ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಮಿಯಾ ತುಮ್ಕಾ ಸಾಂಗಲ್ಲೆ ಸಗ್ಳೆ ಯಾದ್ ಕರುನ್ ದಿತಾ ಅನಿ ತುಮ್ಕಾ ಸಗ್ಳೆ ಶಿಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:26
75 ತಿಳಿವುಗಳ ಹೋಲಿಕೆ  

ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.


ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.


ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.


ಇದನ್ನು ಕುರಿತು ಪವಿತ್ರಾತ್ಮರು ಕೂಡ ನಮಗೆ ಸಾಕ್ಷಿಕೊಡುತ್ತಾರೆ:


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು :


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು : “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.


ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು