Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:27 - ಕನ್ನಡ ಸತ್ಯವೇದವು C.L. Bible (BSI)

27 ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಶಾಂತಿ ತುಮ್ಚ್ಯಾ ಮದ್ದಿ ಮಿಯಾ ಸೊಡುನ್ ಜಾತಾ, ಹಿ ಮಾಜಿ ಸ್ವತಾಚಿ ಶಾಂತಿ ಮಿಯಾ ತುಮ್ಕಾ ದಿತಾ. ಹ್ಯಾ ಜಗಾನ್ ದಿಲ್ಲ್ಯಾ ಸರ್ಕೆ ಮಿಯಾ ತಿ ತುಮ್ಕಾ ದಿ ನಾ. ಚಿಂತಾ ಕರುನಕಾಶಿ ಅನಿ ತುಮ್ಚಿ ಮನಾ ತಳ್ಮಳಿ ನಸ್ತಾನಾ ರ್‍ಹಾಂವ್ದಿ ಅನಿ ಭಿಂವ್ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:27
65 ತಿಳಿವುಗಳ ಹೋಲಿಕೆ  

ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!


ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.


ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.


ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ I ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ II


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II


ನೀನು ಅಂಜಬೇಕಾಗಿಲ್ಲ ಇರುಳಿನ ದುರಿತಕೆ I ಹಗಲಿನಲಿ ಹಾರಿಬರುವ ಬಿರುಸು ಬಾಣಕೆ II


ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!


ಹೆದರಿಕೆ ಉಂಟಾದಾಗ I ನೀನೆ ನನಗೆ ಆಶ್ರಯ II


ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.


ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!


ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!


“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಶಾಂತಿಸಮಾಧಾನಕ್ಕೆ ನಾನು ದೂರವಾದೆ ಸುಖಸಂತೋಷವನ್ನು ಮರೆತುಹೋದೆ.


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು